About: http://data.cimple.eu/claim-review/6bec23ee64dc6a75bb588c41d4ac5c9e83e45c79b200af20a85eabbf     Goto   Sponge   NotDistinct   Permalink

An Entity of Type : schema:ClaimReview, within Data Space : data.cimple.eu associated with source document(s)

AttributesValues
rdf:type
http://data.cimple...lizedReviewRating
schema:url
schema:text
  • ಫ್ಯಾಕ್ಟ್ಚೆಕ್: ಬಾಲ್ಕನಿಯಿಂದ ಬೀಳುತ್ತಿದ್ದ ಮಗುವನ್ನು ಕೋತಿಯೊಂದು ರಕ್ಷಿಸಿತು ಎಂದು ಎಐ ವಿಡಿಯೋ ಹಂಚಿಕೆ ಬಾಲ್ಕನಿಯಿಂದ ಬೀಳುತ್ತಿದ್ದ ಮಗುವನ್ನು ಕೋತಿಯೊಂದು ರಕ್ಷಿಸಿತು ಎಂದು ಎಐ ವಿಡಿಯೋ ಹಂಚಿಕೆ Claim : ಬಾಲ್ಕನಿಯಿಂದ ಬೀಳುತ್ತಿದ್ದ ಮಗುವನ್ನು ಕೋತಿಯೊಂದು ರಕ್ಷಿಸಿತುFact : ವೈರಲ್ ಆದ ವಿಡಿಯೋವನ್ನು ಎಐ ಬಳಸಿ ರಚಿಸಲಾಗಿದೆಇತ್ತೀಚಿಗೆ ಸಾಮಾಜಿಕ ಜಾಲತಾಣದಲ್ಲಿ ಕೋತಿಯೊಂದು ಮಗುವನ್ನು ಕಾಪಾಡಿದ ವಿಡಿಯೋವೊಂದು ವೈರಲ್ ಆಗುತ್ತಿದೆ. ಈ ವಿಡಿಯೋದಲ್ಲಿ, ಒಂದು ಅಪಾರ್ಟ್ಮೆಂಟ್ ಕಟ್ಟಡದ ಮೇಲಿನ ಮಹಡಿಯಲ್ಲಿ ಒಂದು ಚಿಕ್ಕ ಮಗು ಬಾಲ್ಕನಿ ರೇಲಿಂಗ್ ಹಿಡಿದುಕೊಂದು ನೇತಾಡುತ್ತಿರುವುದನ್ನು ನೋಡಬಹುದು. ಮತ್ತೊಂದು ಕಡೆ ಕೋತಿಯೊಂದು ಈ ದೃಶ್ಯವನ್ನು ನೋಡಿ ಆ ಮಗುವನ್ನು ಜಿಗಿದು ಹಿಡಿದುಕೊಂಡು ಸುರಕ್ಷಿತವಾಗಿ ಬಾಲ್ಕನಿಯಲ್ಲಿ ಬಿಡುವುದನ್ನು ಕಾಣಬಹುದು. ಏಪ್ರಿಲ್ 17,2026ರಂದು ಎಕ್ಸ್ ಖಾತೆದಾರರೊಬ್ಬರು ತಮ್ಮ ಖಾತೆಯಲ್ಲಿ ವೈರಲ್ ಆದ ವಿಡಿಯೋವನ್ನು ಹಂಚಿಕೊಂಡು ʼThis isn't just any ordinary balcony… it's like a "Test match of life" is underway. Up above, the kid is dangling from the railing… down below, the depths, clothes drying here and there, an open door… and the vibe is like everything's totally normal. But the twist in the story hits when a monkey suddenly makes its grand entry. The scene feels like the climax of some movie One second's delay and it's all over. Fear, shock, and questions… this picture delivers it all in one go. Sometimes accidents don't scream… they just stand there quietly in front of you. Staying alert is the real hero move.ʼ ಎಂಬ ಶೀರ್ಷಿಕೆಯೊಂದಿಗೆ ವಿಡಿಯೋವನ್ನು ಹಂಚಿಕೊಂಡಿರುವುದನ್ನು ಕಾಣಬಹುದು, ಶೀರ್ಷಿಕೆಯನ್ನು ಕನ್ನಡಕ್ಕೆ ಅನುವಾದಿಸಿದಾಗ ʼಇದು ಸಾಮಾನ್ಯವಾಗಿ ನಾವು ನೋಡುವ ಬಾಲ್ಕನಿ ದೃಶ್ಯವಲ್ಲ. ಒಂದು ಅಪಾರ್ಟ್ಮೆಂಟ್ನ ಮೇಲಿನ ಮಹಡಿಯಲ್ಲಿ ಚಿಕ್ಕ ಮಗು ಬಾಲ್ಕನಿ ರೇಲಿಂಗ್ ಮೇಲೆ ಅಪಾಯಕರವಾಗಿ ನೇತಾಡುತ್ತಿರುವುದನ್ನು ಕಾಣಬಹುದು. ಇವೆಲ್ಲವೂ ಮೊದಲ ನೋಟಕ್ಕೆ ಸಾಮಾನ್ಯವಾಗಿ ಕಾಣಿಸಿದರೂ, ಪರಿಸ್ಥಿತಿ ಬಹಳ ಗಂಭೀರವಾಗಿದೆ. ಈ ವೇಳೆ ಏಕಾಏಕಿ ಒಂದು ಕೋತಿ ಅಲ್ಲಿ ಕಾಣಿಸಿಕೊಳ್ಳುತ್ತದೆ. ಅದು ಅಲ್ಲಿ ಇರುವುದರಿಂದ ಪರಿಸ್ಥಿತಿ ಇನ್ನಷ್ಟು ತೀವ್ರವಾಗುತ್ತದೆ. ಮಗು ಈಗಾಗಲೇ ಅಪಾಯಕರ ಸ್ಥಿತಿಯಲ್ಲಿ ಇರುವುದರಿಂದ, ಯಾವುದೇ ಕ್ಷಣದಲ್ಲಿ ಏನಾದರೂ ಅನಾಹುತ ಸಂಭವಿಸುವ ಸಾಧ್ಯತೆಯಿದೆ. ಈ ದೃಶ್ಯ ಒಂದು ಸಿನಿಮಾದ ಕ್ಲೈಮ್ಯಾಕ್ಸ್ ಸನ್ನಿವೇಶದಂತಿದೆ. ಒಂದು ಕ್ಷಣದ ತಪ್ಪು ದೊಡ್ಡ ಪರಿಣಾಮಕ್ಕೆ ಕಾರಣವಾಗಬಹುದು. ಭಯ, ಆತಂಕ, ಮತ್ತು ಅನಿಶ್ಚಿತತೆ ಎಲ್ಲಾ ಒಂದೇ ಸಮಯದಲ್ಲಿ ಮೂಡಿಸುವಂತಹ ಕ್ಷಣ ಇದು. ಕೆಲವು ಅಪಘಾತಗಳು ಮುಂಚಿತವಾಗಿ ಎಚ್ಚರಿಕೆ ನೀಡುವುದಿಲ್ಲ. ಅವು ನಮ್ಮ ಕಣ್ಣೆದುರೇ ನಿಶ್ಶಬ್ದವಾಗಿ ನಡೆಯುತ್ತವೆ. ಆದ್ದರಿಂದ, ಇಂತಹ ಸಂದರ್ಭಗಳಲ್ಲಿ ಜಾಗ್ರತೆ ಮತ್ತು ಎಚ್ಚರಿಕೆಯೇ ಅತ್ಯಂತ ಮುಖ್ಯʼ ಎಂದು ಬರೆದಿರುವುದನ್ನು ಕಾಣಬಹುದು ವೈರಲ್ ಆದ ವಿಡಿಯೋವಿನ ಸ್ಕ್ರೀನ್ಶಾಟ್ನ್ನು ನೀವಿಲ್ಲಿ ಕಾಣಬಹುದು. (ಆರ್ಕೈವ್) ಏಪ್ರಿಲ್ 18, 2026ರಂದು ಮತ್ತೊಂದು ಎಕ್ಸ್ ಖಾತೆದಾರರೊಬ್ಬರು ತಮ್ಮ ಖಾತೆಯಲ್ಲಿ ʼएक बंदर ने एक बच्चे को बालकनी से गिरने से बचा लिया, जिस से हर कोई हैरान रह गया।ʼ ಎMಬ ಶೀರ್ಷಿಕೆಯೊಂದಿಗೆ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಶೀರ್ಷಿಕೆಯನ್ನು ಕನ್ನಡಕ್ಕೆ ಅನುವಾದಿಸಿದಾಗ ʼಬಾಲ್ಕನಿಯಿಂದ ಬೀಳುವ ಹಂತದಲ್ಲಿದ್ದ ಮಗುವನ್ನು ಒಂದು ಕೋತಿ ಕಾಪಾಡಿದೆʼ ಎಂದು ಬರೆದಿರುವುದನ್ನು ನಾವಿಲ್ಲಿ ನೋಡಬಹುದು. ವೈರಲ್ ಆದ ವಿಡಿಯೋವಿನ ಸ್ಕ್ರೀನ್ಶಾಟ್ನ್ನು ನೀವಿಲ್ಲಿ ಕಾಣಬಹುದು. (ಆರ್ಕೈವ್) ವೈರಲ್ ಆದ ಮತ್ತಷ್ಟು ವಿಡಿಯೋಗಳನ್ನು ನೀವಿಲ್ಲಿ ನೋಡಬಹುದು. ಫ್ಯಾಕ್ಟ್ಚೆಕ್ ವೈರಲ್ ಆದ ವಿಡಿಯೋವಿನಲ್ಲಿ ಯಾವುದೇ ಸತ್ಯಾಂಶವಿಲ್ಲ. ವೈರಲ್ ಆದ ವಿಡಿಯೋವನ್ನು ಎಐ ಮೂಲಕ ರಚಿಸಲಾಗಿದೆ. ನಾವು ವೈರಲ್ ಆದ ವಿಡಿಯೋ ಬಗ್ಗೆ ಸತ್ಯಾಂಶವನ್ನು ತಿಳಿಯಲು ಗೂಗಲ್ನಲ್ಲಿ ಫೋಟೋವಿನ ಕೆಲವು ಕೀಫ್ರೇಮ್ಗಳನ್ನು ಉಪಯೋಗಿಸಿ ಗೂಗಲ್ ರಿವರ್ಸ್ ಇಮೇಜ್ ಸರ್ಚ್ ಮೂಲಕ ಹುಡುಕಾಟ ನಡೆಸಿದೆವು. ಹುಡುಕಾಟದಲ್ಲಿ ನಮಗೆ ಯಾವುದೇ ಮಾಹಿತಿ ಸಿಗಲಿಲ್ಲ. ವೈರಲ್ ಆದ ವಿಡಿಯೋವನ್ನು ಸೂಕ್ಷ್ಮವಾಗಿ ಗಮನಿಸಿದಾಗ, ವೈರಲ್ ಆದ ವಿಡಿಯೋವಿನ ಹಲವು ಫ್ರೇಮ್ಗಳಲ್ಲಿ ಜರ್ಕ್ ಮೋಷನ್ ಆಗುವುದು ನಾವು ಕಾಣಬಹುದು, ಅಷ್ಟೇ ಅಲ್ಲ ವೀಡಿಯೊವನ್ನು ಸೂಕ್ಷ್ಮವಾಗಿ ಗಮನಿಸಿದಾಗ ಇದರಲ್ಲಿ ಯಾವುದೇ ನೈಜ್ಯತೆಯ ಅಂಶವಿಲ್ಲ ಎನ್ನುವುದು ಕಂಡುಬಂದಿತು. ಇಂತಹ ತಪ್ಪುಗಳು ಸಾಮಾನ್ಯವಾಗಿ ಎಐ ಮೂಲಕ ತಯಾರಿಸಿದ ವಿಡಿಯೋಗಳಲ್ಲಿ ಕಾಣಿಸುತ್ತವೆ. ಈ ಎಲ್ಲ ಕಾರಣಗಳಿಂದ ಈ ವಿಡಿಯೋ ಡಿಜಿಟಲ್ ರೀತಿಯಲ್ಲಿ ತಯಾರಿಸಿರಬಹುದು ಎಂಬ ಅನುಮಾನಗಳು ಮೂಡಿ ನಾವು ಎಐ ಟೂಲ್ಗಳನ್ನು ಉಪಯೋಗಿಸಿ ಹುಡುಕಾಟ ನಡೆಸಿದೆವು. ಇದನ್ನೇ ನಾವು ಸುಳಿವಾಗಿ ಬಳಸಿಕೊಂಡು ವೈರಲ್ ಆದ ವಿಡಿಯೋವಿನ ವಿವಿಧ ಫ್ರೇಮ್ಗಳನ್ನು ಉಪಯೋಗಿಸಿ ಎಐ ಡಿಟೆಕ್ಟರ್ ಟೂಲ್ ಮೂಲಕ ಹುಡುಕಾಟ ನಡೆಸಿದೆವು. ಎಐ ಡಿಟೆಕ್ಟರ್ ಟೂಲ್ ʼಸೈಟ್ ಇಂಜಿನ್ʼ ಟೂಲ್ ಮೂಲಕ ಹುಡುಕಾಟ ನಡೆಸಿದೆವು. ಹುಡುಕಾಟದಲ್ಲಿ ನಮಗೆ ವೈರಲ್ ಆದ ವಿಡಿಯೋ 93% ಶಾತದಷ್ಟು ಎಐ ಮೂಲಕ ರಚಿಸಲಾಗಿದೆ ಎಂದು ಸಾಭೀತಾಗಿದೆ. ಮತ್ತೋಂದು ಎಐ ಡಿಟೆಕ್ಟರ್ ಟೂಲ್ ಮೂಲಕ ಹುಡುಕಾಟ ನಡೆಸಿದೆವು. ಎಐ ಡಿಟೆಕ್ಟರ್ ಟೂಲ್ ʼಹೈವ್ ಮಾಡರೇಶನ್ʼ ಟೂಲ್ ಮೂಲಕ ಹುಡುಕಾಟ ನಡೆಸಿದೆವು. ಹುಡುಕಾಟದಲ್ಲಿ ನಮಗೆ ವೈರಲ್ ಆದ ವಿಡಿಯೋವನ್ನು 89.5% ಪ್ರತಿಶಾತದಷ್ಟು ಎಐ ಮೂಲಕ ರಚಿಸಲಾಗಿದೆ ಎಂದು ಸಾಭೀತಾಗಿದೆ. ಮತ್ತೋಂದು ಎಐ ಡಿಟೆಕ್ಟರ್ ಟೂಲ್ ಮೂಲಕ ಹುಡುಕಾಟ ನಡೆಸಿದೆವು. ಎಐ ಡಿಟೆಕ್ಟರ್ ಟೂಲ್ ʼಟ್ರೂತ್ ಸ್ಕ್ಯಾನ್ʼ ಎಐ ಟೂಲ್ ಮೂಲಕ ಹುಡುಕಾಟ ನಡೆಸಿದೆವು. ಹುಡುಕಾಟದಲ್ಲಿ ನಮಗೆ ವೈರಲ್ ಆದ ವಿಡಿಯೋವನ್ನು 99% ಪ್ರತಿಶಾತದಷ್ಟು ಎಐ ಮೂಲಕ ರಚಿಸಲಾಗಿದೆ ಎಂದು ಸಾಭೀತಾಗಿದೆ. ಇದರಿಂದ ಸಾಭೀತಾಗಿದ್ದೇನೆಂದರೆ, ವೈರಲ್ ಆದ ವಿಡಿಯೋ ಸಾಮಾಜಿಕ ಬಳಕೆದಾರರನ್ನು ತಪ್ಪುದಾರಿಗೆಳೆಯುವ ಕೆಲಸ ಮಾಡುತ್ತಿದೆ. ವಾಸ್ತವಾಗಿ ವೈರಲ್ ಆದ ವಿಡಿಯೋವನ್ನು ಎಐ ಮೂಲಕ ರಚಿಸಲಾಗಿದೆ.
schema:reviewRating
schema:author
schema:datePublished
schema:inLanguage
  • Telugu
schema:itemReviewed
Faceted Search & Find service v1.16.123 as of May 22 2025


Alternative Linked Data Documents: ODE     Content Formats:   [cxml] [csv]     RDF   [text] [turtle] [ld+json] [rdf+json] [rdf+xml]     ODATA   [atom+xml] [odata+json]     Microdata   [microdata+json] [html]    About   
This material is Open Knowledge   W3C Semantic Web Technology [RDF Data]
OpenLink Virtuoso version 07.20.3241 as of May 22 2025, on Linux (x86_64-pc-linux-musl), Single-Server Edition (126 GB total memory, 10 GB memory in use)
Data on this page belongs to its respective rights holders.
Virtuoso Faceted Browser Copyright © 2009-2026 OpenLink Software