About: http://data.cimple.eu/claim-review/197a2bf968b773ab68cac521d94197d5c53fdd20b767c1c6aed3bb45     Goto   Sponge   NotDistinct   Permalink

An Entity of Type : schema:ClaimReview, within Data Space : data.cimple.eu associated with source document(s)

AttributesValues
rdf:type
http://data.cimple...lizedReviewRating
schema:url
schema:text
  • ಫ್ಯಾಕ್ಟ್ಚೆಕ್: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಹೆದ್ದಾರಿಯಲ್ಲಿ ಪ್ರಯಾಣಿಸುತ್ತಾ ನರೇಂದ್ರ ಮೋದಿಯವರ ಪ್ರಮಾಣ ವಚನವನ್ನು ವೀಕ್ಷಿಸುತ್ತಿರುವ ವಿಡಿಯೋ ಮಾರ್ಫ್ ಮಾಡಲಾಗಿದೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಹೆದ್ದಾರಿಯಲ್ಲಿ ಪ್ರಯಾಣಿಸುತ್ತಾ ನರೇಂದ್ರ ಮೋದಿಯವರ ಪ್ರಮಾಣ ವಚನವನ್ನು ವೀಕ್ಷಿಸುತ್ತಿರುವ ವಿಡಿಯೋ ಮಾರ್ಫ್ ಮಾಡಲಾಗಿದೆ Claim :ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ವಿಡಿಯೋವನ್ನು ರಾಹುಲ್ ಗಾಂಧಿ ವೀಕ್ಷಿಸುತ್ತಿರುವ ವಿಡಿಯೋ ವೈರಲ್ Fact :ಚುನಾವಣಾ ಪ್ರಚಾರದ ಭಾಗವಾಗಿ ರಾಹುಲ್ ಗಾಂಧಿ ಅವರು ಪ್ರಯಾಣಿಸುತ್ತಿದ್ದಾಗ ತೆಗೆದ ವಿಡಿಯೋವದು. ರಾಹುಲ್ ಗಾಂಧಿ ಅವರ ವಾಹನದಲ್ಲಿ ಯಾವುದೇ ವಿಡಿಯೋ ಪ್ಲೇ ಆಗುತ್ತಿಲ್ಲ. ಇತ್ತೀಚೆಗಷ್ಟೇ ನಡೆದ ಚುನಾವಣೆಯಲ್ಲಿ ಜಯಭೇರಿ ಬಾರಿಸಿರುವ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ-ಎನ್ಡಿಎ ಮೈತ್ರಿಕೂಟ ಮೂರನೇ ಬಾರಿಗೆ ಕೇಂದ್ರದಲ್ಲಿ ಸರ್ಕಾರ ರಚನೆ ಮಾಡುವಲ್ಲಿ ಯಶಸ್ವಿಯಾಗಿದೆ. ಕಳೆದ 10 ವರ್ಷಗಳಿಂದ ದೇಶದ ಪ್ರಧಾನಿಯಾಗಿ ಸೇವೆ ಸಲ್ಲಿಸುತ್ತಿರುವ ನರೇಂದ್ರ ಮೋದಿ ಹ್ಯಾಟ್ರಿಕ್ ಸಾಧನೆ ಮಾಡಿ ಮೂರನೇ ಬಾರಿಗೆ ಪ್ರಧಾನಿ ಗದ್ದುಗೆ ಏರಿದ್ದಾರೆ. ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಜೂನ್ 9, 2024 ರಂದು ಪ್ರಮಾಣ ವಚನ ಸ್ವೀಕಾರ ಸಮಾರಂಭ ಅದ್ಧೂರಿಯಾಗಿ ನಡೆಯಿತು. ಪ್ರಧಾನಿ ಜೊತೆಗೆ 71 ಮಂದಿ ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ರಾಹುಲ್ ಗಾಂಧಿ ಅವರನ್ನು ಲೋಕಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಿಸುವ ನಿರ್ಣಯವನ್ನು ಕಾಂಗ್ರೆಸ್ ಅಂಗೀಕರಿಸಿದೆ. ರಾಹುಲ್ ಗಾಂಧಿ ವಾಹನದಲ್ಲಿ ಪ್ರಯಾಣಿಸುತ್ತಿದ್ದಾಗ ಕಾರಿನಲ್ಲಿರುವ ಟಿವಿಯಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕರಿಸುತ್ತಿರುವ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.‘Meanwhile, Somewhere on a highway built by Nitin Gadkari #Modicabinet’ ಎಂಬ ಶೀರ್ಷಿಕೆಯೊಂದಿಗೆ ವಿಡಿಯೋವೊಂದು ವೈರಲ್ ಆಗುತ್ತಿದೆ. ಮೋದಿ ಸಂಪುಟ ನಿರ್ಮಿಸಿರುವ ರಸ್ತೆಯಲ್ಲಿ ರಾಹುಲ್ ಗಾಂಧಿ ಕಾರು ಓಡಿಸುತ್ತಿದ್ದಾರೆ ಎಂಬ ಹೇಳಿಕೆಯೊಂದಿಗೆ ವಿಡಿಯೋ ಶೇರ್ ಆಗುತ್ತಿದೆ. Meanwhile somewhere on a highway built by Nitin Gadkari 😎#ModiCabinet#Modi pic.twitter.com/TRzJ56ZG9n— Ashok Kumar ✨ (@ASHOKKU38499690) June 9, 2024 Meanwhile somewhere on a highway built by Nitin Gadkari 😎#ModiCabinet one Papu olwys Papu 😂 pic.twitter.com/CtSYIauGAI— ŸôGésh GûPťÃ O+ve( Common Man) (@YogeshKGupta4) June 9, 2024 ಫ್ಯಾಕ್ಟ್ಚೆಕ್ ವೈರಲ್ ಆದ ಆರೋಪದಲ್ಲಿ ಯಾವುದೇ ಸತ್ಯಾಂಶವಿಲ್ಲ. ವೈರಲ್ ಆದ ವಿಡಿಯೋ ಹಳೆಯದ್ದು. ಮೂಲ ವೀಡಿಯೋದಲ್ಲಿ ಎಲ್ಲಿಯೂ ರಾಹುಲ್ ಗಾಂಧಿ ಅವರು ನರೇಂದ್ರ ಮೋದಿಯವರ ಪ್ರಮಾಣ ವಚನ ಸ್ವೀಕಾರ ಸಮಾರಂಭವನ್ನು ಹೆದ್ದಾರಿಯಲ್ಲಿ ಸಾಗುತ್ತಿರುವಾಗ ವೀಕ್ಷಿಸುತ್ತಿರುವುದಾಗಿ ಕಾಣಲಿಲ್ಲ. ವೈರಲ್ ಆದ ವಿಡಿಯೋವಿನಲ್ಲಿರುವ ಸತ್ಯಾಂಶವನ್ನು ತಿಳಿಯಲು ನಾವು ಗೂಗಲ್ ರಿವರ್ಸ್ ಇಮೇಜ್ ಸರ್ಚ್ ಮೂಲಕ ವೈರಲ್ ವೀಡಿಯೊದಿಂದ ಹೊರತೆಗೆಯಲಾದ ಪ್ರಮುಖ ಕೀಫ್ರೇಮ್ಗಳನ್ನು ಉಪಯೋಗಿಸಿ ಹುಡುಕಾಟ ನಡೆಸಿದೆವು. ಹುಡುಕಾಟದಲ್ಲಿ ನಮಗೆ ವೈರಲ್ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ವಿವಿಧ ಪ್ಲಾಟ್ಫಾರ್ಮ್ಗಳಲ್ಲಿ ಹಂಚಿಕೊಂಡಿರುವುದನ್ನು ಎಂದು ನಾವು ಕಂಡುಕೊಂಡೆವು. ಏಪ್ರಿಲ್ 25, 2024 ರಂದು Instagramನಲ್ಲಿ “Next PM Rahul Gandhi coming on 4th June” ಎಂಬ ಶೀರ್ಷಿಕೆಯೊಂದಿಗೆ ವೀಡಿಯೊವನ್ನು ಹಂಚಿಕೊಳ್ಳಲಾಗಿದೆ. ವೀಡಿಯೊದಿಂದ ಕ್ಲಿಕ್ಕಿಸಿಕೊಂಡ ಚಿತ್ರವನ್ನು ಬಳಕೆದಾರರು ತಮ್ಮ X ಖಾತೆಯಲ್ಲಿ ಮೇ 17, 2024 ರಂದು ಹಂಚಿಕೊಂಡಿದ್ದಾರೆ. ಮರುದಿನ ಸಂಜೆ 6.30ಕ್ಕೆ ದೆಹಲಿಯ ರಾಮಲೀಲಾ ಮೈದಾನದಲ್ಲಿ ರಾಹುಲ್ ಗಾಂಧಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂಬ ಶೀರ್ಷಿಕೆಯೊಂದಿಗೆ ಪೋಸ್ಟ್ ಮಾಡಿದ್ದರು. कल राहुल गांधी दिल्ली के अशोक विहार, राम लीला मैदान में शाम 6:30 जनसभा करेंगे।@RahulGandhi pic.twitter.com/bFQ90NX9T7— Kanika Katiyar (@kanikakatiyarr) May 17, 2024 ಮೂಲ ದೃಶ್ಯಗಳಲ್ಲಿ, ಎಲೆಕ್ಟ್ರಿಕ್ ಡಿವೈಸ್ ಆಫ್ ಆಗಿದೆ. ರಾಹುಲ್ ಗಾಂಧಿಗೆ ಇದರಲ್ಲಿ ಏನೂ ನೋಡುತ್ತಿಲ್ಲ. ಮೋದಿ ಪ್ರಮಾಣ ವಚನ ಸ್ವೀಕಾರ ಸಮಾರಂಭದ ವಿಡಿಯೋವನ್ನು ಮೂಲ ವಿಡಿಯೋಗೆ ಎಡಿಟ್ ಮಾಡಿ ಸೇರಿಸಲಾಗಿದೆ. ಎರಡು ವೀಡಿಯೊಗಳ ನಡುವಿನ ವ್ಯತ್ಯಾಸವನ್ನು ನೀವಿಲ್ಲಿ ಗಮನಿಸಬಹುದು: ಹಾಗಾಗಿ ರಾಹುಲ್ ಗಾಂಧಿ ವಾಹನದಲ್ಲಿ ಸಂಚರಿಸಿ ಮೋದಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ವೀಕ್ಷಿಸುತ್ತಿದ್ದಾರೆ ಎಂಬ ಹೇಳಿಕೆಯಲ್ಲಿ ಸತ್ಯಾಂಶವಿಲ್ಲ. ವೈರಲ್ ಆದ ವಿಡಿಯೋವನ್ನು ಮಾರ್ಫ್ ಮಾಡಲಾಗಿದೆ.
schema:mentions
schema:reviewRating
schema:author
schema:datePublished
schema:inLanguage
  • Telugu
schema:itemReviewed
Faceted Search & Find service v1.16.115 as of Oct 09 2023


Alternative Linked Data Documents: ODE     Content Formats:   [cxml] [csv]     RDF   [text] [turtle] [ld+json] [rdf+json] [rdf+xml]     ODATA   [atom+xml] [odata+json]     Microdata   [microdata+json] [html]    About   
This material is Open Knowledge   W3C Semantic Web Technology [RDF Data] Valid XHTML + RDFa
OpenLink Virtuoso version 07.20.3238 as of Jul 16 2024, on Linux (x86_64-pc-linux-musl), Single-Server Edition (126 GB total memory, 11 GB memory in use)
Data on this page belongs to its respective rights holders.
Virtuoso Faceted Browser Copyright © 2009-2025 OpenLink Software