schema:text
| - Newchecker.in is an independent fact-checking initiative of NC Media Networks Pvt. Ltd. We welcome our readers to send us claims to fact check. If you believe a story or statement deserves a fact check, or an error has been made with a published fact check
Contact Us: checkthis@newschecker.in
Fact checks doneFOLLOW US
Fact Check
ಬೆಂಗಳೂರು-ಮೈಸೂರು ಹೈವೇಯ ನಿಡ್ಲಘಟ್ಟ ಸರ್ವಿಸ್ ರಸ್ತೆಯಲ್ಲಿ ಚಿರತೆಯೊಂದು ಕಾಣಿಸಿಕೊಂಡಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೋ ಹರಿದಾಡುತ್ತಿದೆ. ಫೇಸ್ಬುಕ್ ಹೇಳಿಕೆಯೊಂದರಲ್ಲಿ ವೀಡಿಯೋವನ್ನು ಹಂಚಿಕೊಳ್ಳಲಾಗಿದೆ.
ಇದರ ಬಗ್ಗೆ ನ್ಯೂಸ್ಚೆಕರ್ ಸತ್ಯಶೋಧನೆ ನಡೆಸಿದ್ದ, ಇದು ಸುಳ್ಳು ಎಂದು ಕಂಡುಬಂದಿದೆ.
Also Read: ಬೆಂಗಳೂರು ಕುಡಿಯುವ ನೀರಿನ ಕುರಿತ ಸಭೆಯಲ್ಲಿ ಡಿ.ಕೆ. ಶಿವಕುಮಾರ್ ಚಿಪ್ಸ್ ತಿನ್ನುತ್ತಿದ್ದರೇ?
ವೈರಲ್ ವೀಡಿಯೋದ ಸತ್ಯಾಸತ್ಯತೆಯನ್ನು ತನಿಖೆ ನಡೆಸಲು ನಾವು ವೀಡಿಯೋದ ಕೀಫ್ರೇಂಗಳನ್ನು ತೆಗೆದು ರಿವರ್ಸ್ ಇಮೇಜ್ ಸರ್ಚ್ ನಡೆಸಿದ್ದೇವೆ. ಈ ವೇಳೆ ಎಪ್ರಿಲ್ 17, 2023ರ Marvelous belgaum ಖಾತೆಯ ಫೇಸ್ಬುಕ್ ಪೋಸ್ಟ್ ಒಂದನ್ನು ಗಮನಿಸಿದ್ದೇವೆ. ಈ ಪೋಸ್ಟ್ನಲ್ಲಿ ವೈರಲ್ ಆಗಿರುವ ವೀಡಿಯೋ ಬೆಳಗಾವಿಯದ್ದಲ್ಲ, ಇದು ಗದಗದ್ದುಎಂದು ಹೇಳಲಾಗಿದೆ. ಇದನ್ನು ಸಾಕ್ಷ್ಯವಾಗಿ ಪರಿಗಣಿಸಿ ನಾವು ಇನ್ನಷ್ಟು ಶೋಧ ನಡೆಸಿದ್ದೇವೆ. ಈ ವೇಳೆ ಮಾಧ್ಯಮ ವರದಿಗಳು ಪತ್ತೆಯಾಗಿವೆ.
ಎಪ್ರಿಲ್ 17, 2023ರಂದು ಇಟಿವಿ ಭಾರತ್ ಮಾಡಿದ ವರದಿಯ ಪ್ರಕಾರ, “ಗದಗ : ಬಿಂಕದಕಟ್ಟಿ ಬಳಿಯ ಬೈಪಾಸ್ ಸರ್ವೀಸ್ ರಸ್ತೆಯಲ್ಲಿ ಚಿರತೆ ಪ್ರತ್ಯಕ್ಷ” ಎಂದಿದೆ. ಇಲ್ಲಿಯ ಬಿಂಕದಕಟ್ಟಿ ಬಳಿಯ ಬೈಪಾಸ್ ಸರ್ವೀಸ್ ರಸ್ತೆಯಲ್ಲಿ ಭಾನುವಾರ ರಾತ್ರಿ ಚಿರತೆಯೊಂದು ಪ್ರತ್ಯಕ್ಷವಾಗಿದೆ. ರಾತ್ರಿ 9 ಗಂಟೆ ಸುಮಾರಿಗೆ ಚಿರತೆ ಪತ್ತೆಯಾಗಿದ್ದು, ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ. ಆರಾಮದಾಯಕವಾಗಿ ವಿಶ್ರಾಂತಿ ರೀತಿಯಲ್ಲಿ ಚಿರತೆ ಕಂಡು ಬಂದಿದ್ದು, ಪ್ರಯಾಣಿಕರೊಬ್ಬರು ಚಿರತೆಯ ವಿಡಿಯೋವನ್ನು ತಮ್ಮ ಮೊಬೈಲ್ನಲ್ಲಿ ಸೆರೆ ಹಿಡಿದಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್ ಆಗಿದೆ ಎಂದು ಹೇಳಲಾಗಿದೆ.
ಎಪ್ರಿಲ್ 17, 2023ರ ಟೈಮ್ಸ್ ನೌ ವರದಿ ಪ್ರಕಾರ, ಗದಗ ಬಿಂಕದಟ್ಟಿಯ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಕಳೆದ ಭಾನುವಾರ ಚಿರತೆ ಕಾಣಿಸಿಕೊಂಡಿದೆ. ಇದರಿಂದ ಹಲವು ದ್ವಿಚಕ್ರವಾಹನ ಸವಾರರು ಆತಂಕಗೊಂಡಿದ್ದಾರೆ. ಸ್ಥಳೀಯ ನಿವಾಸಿಗಳು ಭಯಭೀತರಾಗಿದ್ದು,ಅರಣ್ಯ ಇಲಾಖೆ ಸೂರ್ಯಾಸ್ತದ ಬಳಿಕ ಸಂಚರಿಸುವ ವೇಳೆ ಎಚ್ಚರಿಕೆಯಿಂದ ಇರುವಂತೆ ಸನಿಹದ ಅಸುಂಡಿ, ಬಿಂಕದಕಟ್ಟಿ, ಟೀಚರ್ಸ್ ಕಾಲನಿಯ ನಿವಾಸಿಗಳನ್ನು ಎಚ್ಚರಿಸಿದ್ದಾರೆ ಎಂದಿದೆ.
ಎಪ್ರಿಲ್ 17, 2023ರ ವಿಸ್ತಾರ ನ್ಯೂಸ್ ಯೂಟ್ಯೂಬ್ ಚಾನೆಲ್ ನಲ್ಲಿಯೂ “ಗದಗದ ಬಿಂಕದಕಟ್ಟಿಯಲ್ಲಿ ತಡರಾತ್ರಿ ಚಿರತೆ ಕಾಣಿಸಿಕೊಂಡಿದ್ದು ಪ್ರಯಾಣಿಕರು ಆತಂಕಕ್ಕೀಡಾಗಿದ್ದಾರೆ.” ಎಂದಿದೆ.
ಇದೇ ರೀತಿಯ ವರದಿಗಳನ್ನು ಇಲ್ಲಿ ಇಲ್ಲಿ ಓದಬಹುದು.
ಈ ಸತ್ಯಶೋಧನೆಯ ಪ್ರಕಾರ, ಚಿರತೆ ಕಂಡುಬಂದಿರುವುದು ಬೆಂಗಳೂರು-ಮೈಸೂರು ಹೈವೇಯಲ್ಲಿ ಅಲ್ಲ,ಬದಲಾಗಿ ಗದಗ ಬಳಿಕ ಬಿಂಕದಕಟ್ಟಿ ಎಂಬಲ್ಲಾಗಿದೆ. ಇದು 2023ರ ಘಟನೆ ಎಂದು ತಿಳಿದುಬಂದಿದೆ.
Also Read: ಮುಂದಿನ ಜನ್ಮದಲ್ಲಿ ಹುಟ್ಟುವುದಾದರೆ ಮುಸ್ಲಿಂ ಆಗಿಯೇ ಹುಟ್ಟುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆಯೇ?
Our Sources:
Report By Etv Bharat, Dated: April 17, 2023
Report By Times Now, Dated: April 17, 2023
YouTube Video By Vistara News, Dated: April 17, 2023
ಯಾವುದೇ ಕ್ಲೈಮ್ ಅನ್ನು ನಾವು ವಾಸ್ತವಿಕವಾಗಿ ಪರಿಶೀಲಿಸಬೇಕೆಂದು ನೀವು ಬಯಸಿದರೆ, ಪ್ರತಿಕ್ರಿಯೆಯನ್ನು ನೀಡಿ ಅಥವಾ ದೂರು ಸಲ್ಲಿಸಬಹುದು, ಜೊತೆಗೆ 9999499044 ನಲ್ಲಿ ನಮಗೆ WhatsApp ಮಾಡಿ ಅಥವಾ → checkthis@newschecker.in ಮೂಲಕ ನಮಗೆ ಇಮೇಲ್ ಮಾಡಿ. ಸಂಪರ್ಕಿಸಿ ಪುಟದ ಮೂಲಕ ನೀವು ನಮ್ಮನ್ನು ಸಂಪರ್ಕಿಸಬಹುದು ಮತ್ತು ಫಾರಂ ಅನ್ನು ಭರ್ತಿ ಮಾಡಬಹುದು.
Ishwarachandra B G
July 1, 2024
Ishwarachandra B G
March 23, 2024
Ishwarachandra B G
January 13, 2023
|