About: http://data.cimple.eu/claim-review/e201e3b8f1d25a5116dd09eb178eb0947669cc100c8b703d812322da     Goto   Sponge   NotDistinct   Permalink

An Entity of Type : schema:ClaimReview, within Data Space : data.cimple.eu associated with source document(s)

AttributesValues
rdf:type
http://data.cimple...lizedReviewRating
schema:url
schema:text
  • ಫ್ಯಾಕ್ಟ್ಚೆಕ್: ಇತ್ತೀಚೆಗೆ ಭಾರತ ಮತ್ತು ಚೀನಾ ಸೇನೆಗಳ ನಡುವೆ ಘರ್ಷಣೆ ನಡೆದಿದೆ ಎಂಬ ವೈರಲ್ ಆದ ಸುದ್ದಿಯಲ್ಲಿ ಯಾವುದೇ ಸತ್ಯಾಂಶವಿಲ್ಲ. ಇತ್ತೀಚೆಗೆ ಭಾರತ ಮತ್ತು ಚೀನಾ ಸೇನೆಗಳ ನಡುವೆ ಘರ್ಷಣೆ ನಡೆದಿದೆ ಎಂಬ ವೈರಲ್ ಆದ ಸುದ್ದಿಯಲ್ಲಿ ಯಾವುದೇ ಸತ್ಯಾಂಶವಿಲ್ಲ. Claim :ಲಡಾಖ್ನ ಬರ್ತ್ಸೆ ಪ್ರದೇಶದಲ್ಲಿ ಭಾರತ ಮತ್ತು ಚೀನಾ ಪಡೆಗಳ ನಡುವೆ ಘರ್ಷಣೆ ನಡೆದಿದೆ. Fact :ಭಾರತ ಮತ್ತು ಚೀನಾ ಸೈನಿಕರ ನಡುವಿನ ಘರ್ಷಣೆಯ ಹೇಳಿಕೆಯನ್ನು ಭಾರತೀಯ ಸೇನೆ ತಳ್ಳಿಹಾಕಿದೆ ಕಳೆದ ಕೆಲವು ವರ್ಷಗಳಿಂದ ಭಾರತ ಮತ್ತು ಚೀನಾ ನಡುವೆ ಉದ್ವಿಗ್ನತೆ ನಡೆಯುತ್ತಿದೆ. ಎಲ್ಎಸಿ ಉದ್ದಕ್ಕೂ ಉಭಯ ದೇಶಗಳ ನಡುವಿನ ಉದ್ವಿಗ್ನತೆಗಳಿಂದ ಆಗಾಗ ಘರ್ಷಣೆಗೆ ಕಾರಣವಾಗುತ್ತಿದೆವೆ. ಇತ್ತೀಚೆಗೆ ಪೂರ್ವ ಲಡಾಖ್ನಲ್ಲೂ ಈ ಎರಡೂ ದೇಶಗಳ ಸೈನಿಕರ ನಡುವೆ ಘರ್ಷಣೆ ನಡೆದಿರುವುದು ಗೊತ್ತಾಗಿದೆ. ಭಾರತ ಚೀನಾದ ಷಡ್ಯಂತ್ರಗಳನ್ನು ಬಗ್ಗುಬಡಿಯುತ್ತಿದೆ. ಎರಡೂ ದೇಶಗಳು ಈ ಹಿಂದೆ ದೊಡ್ಡ ಪ್ರಮಾಣದ ಸೇನಾ ನಿಯೋಜನೆಗಳನ್ನು ನಿಯೋಜಿಸಿತ್ತು. ಆದರೆ ಉಭಯ ದೇಶಗಳ ನಡುವಿನ ಸತತ ಮಾತುಕತೆಯಿಂದಾಗಿ ಈಗ ಪರಿಸ್ಥಿತಿ ಶಾಂತವಾಗಿದೆ. ಇದರ ನಡುವೆ, ಪೂರ್ವ ಲಡಾಖ್ನ ಬರ್ಸ್ಟ್ಸೆ ಪ್ರದೇಶದಲ್ಲಿ ಭಾರತೀಯ ಸೇನೆ ಮತ್ತು ಪಿಎಲ್ಎ ಪಡೆಗಳ ನಡುವೆ ಘರ್ಷಣೆ ನಡೆದಿದೆ ಎಂದು ಹಲವಾರು ಸಾಮಾಜಿಕ ಬಳಕೆದಾರರು ತಮ್ಮ ಎಕ್ಸ್ ಖಾತೆಗಳಲ್ಲಿ ಪೋಸ್ಟ್ ಮಾಡುತ್ತಿದ್ದಾರೆ. ಲಡಾಖ್ನ ಪಿಲ್ಲರ್ ಪಾಯಿಂಟ್ 12ರಲ್ಲಿ ಎರಡೂ ದೇಶಗಳ ಸೈನಿಕರ ನಡುವೆ ಹೊಡೆದಾಟ ನಡೆದಿದೆ, ಹೀಗಾಗಿ ಎರಡೂ ದೇಶಗಳ ನಡುವೆ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುವ ಸಾದ್ಯತೆಯಿದೆ ಎಂಬ ಶೀರ್ಷಿಕೆಯೊಂದಿಗೆ ಪೋಸ್ಟ್ಗಳನ್ನು ಮಾಡಲಾಗುತ್ತಿದೆ. Big update from #LAC Ladakh. Reportedly Skirmishes between Indian Army and PLA in Burtse area at pillar point 12 in Ladakh. The Confrontation took place between 14 Garhwal and Chinese soldiers.— Vikram Pratap Singh (@VIKRAMPRATAPSIN) August 12, 2024 Reportedly Skirmishes between Indian Army and PLA in Burtse area at pillar point 12 in Ladakh. The Confrontation took place between 14 Garhwal and Chinese soldiers.— Insurgency Watch (@Insurgencywatch) August 12, 2024 More details to follow. pic.twitter.com/OyEYIQJbmO ಫ್ಯಾಕ್ಟ್ಚೆಕ್ ವೈರಲ್ ಆದ ಸುದ್ದಿಯಲ್ಲಿ ಯಾವುದೇ ಸತ್ಯಾಂಶವಿಲ್ಲ. ವಯೃಲ್ ಆಗುತ್ತಿರುವ ಹೇಳಿಕೆಯಲ್ಲಿ ಯಾವುದೇ ಸತ್ಯಾಂಶವಿಲ್ಲವೆಂದು ಭಾರತೀಯ ಸೇನೆ ಸ್ಪಷ್ಟನೆ ನೀಡಿದೆ ಎಡಿಜಿ ಪಿಐ - ಇಂಡಿಯನ್ ಆರ್ಮಿ ತನ್ನ ಅಧಿಕೃತ ಎಕ್ಸ್ (ಟ್ವಿಟ್ಟರ್) ಖಾತೆಯಲ್ಲಿ ಭಾರತೀಯ ಸೇನೆ ಮತ್ತು ಚೀನಾ ಸೈನಿಕರ ನಡುವೆ ಇತ್ತೀಚೆಗೆ ಯಾವುದೇ ಘರ್ಷಣೆಯ ಘಟನೆ ನಡೆದಿಲ್ಲ ಎಂದು ಸ್ಪಷ್ಟನೆ ನೀಡಿದೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ಮಾಹಿತಿಯಲ್ಲಿ ಯಾವುದೇ ನಿಜಾಂಶವಿಲ್ಲ. ಜನರು ನಕಲಿ ಸಂದೇಶಗಳ ಬಗ್ಗೆ ಎಚ್ಚರ ವಹಿಸಬೇಕು ಎಂದು ಪೋಸ್ಟ್ ಮಾಡಿದ್ದಾರೆ. अफवाहों से बचें#Fake messages are being circulated on Social Media about Skirmishes between Indian Army & PLA Soldiers today.— ADG PI - INDIAN ARMY (@adgpi) August 12, 2024 The news is incorrect and no such incident has taken place. Request guard against misinformation and #Fake messages.#IndianArmy@DefenceMinIndia… pic.twitter.com/lR3sP9Jawr ಪಿಐಬಿ ಫ್ಯಾಕ್ಟ್ ಚೆಕ್ ಭಾರತೀಯ ಸೇನೆಯ ಜಾಹೀರಾತನ್ನು ರೀ ಪೋಸ್ಟ್ ಮಾಡಿ ವೈರಲ್ ಆದ ಸುದ್ದಿಯಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ಸಾಭೀತು ಮಾಡಿದೆ. ಪೂರ್ವ ಲಡಾಖ್ನಲ್ಲಿ ನೈಜ ನಿಯಂತ್ರಣ ರೇಖೆಯ ಉದ್ದಕ್ಕೂ ಭಾರತ ಮತ್ತು ಚೀನಾ ಸೈನಿಕರ ನಡುವೆ ಘರ್ಷಣೆ ನಡೆದಿದೆ ಎಂದು ಹೇಳುವ ಸಾಮಾಜಿಕ ಮಾಧ್ಯಮ ವರದಿಗಳನ್ನು ಭಾರತೀಯ ಸೇನೆ ನಿರಾಕರಿಸಿದೆ ಎಂದು ಜಾಗರನ್ ಇಂಗ್ಲಿಷ್ ವೆಬ್ಸೈಟ್ ವರದಿ ಮಾಡಿದೆ. ಅಷ್ಟೇ ಅಲ್ಲ, LACಯಲ್ಲಿ ಅಶಾಂತಿ ಹೊಸ ಸಮಸ್ಯೆಯಲ್ಲ ಎಂದು ಲೇಖನದಲ್ಲಿರುವುದನ್ನು ನಾವು ಗಮನಿಸಬಹುದು. 2020 ರಲ್ಲಿ ಪೂರ್ವ ಲಡಾಖ್ನಲ್ಲಿ ಎರಡೂ ದೇಶಗಳ ಸೇನೆಗಳು ಮುಖಾಮುಖಿಯಾದವು. ಗಾಲ್ವಾನ್ ಕಣಿವೆಯಲ್ಲಿ ಎರಡು ದೇಶಗಳ ನಡುವೆ ಘರ್ಷಣೆಯೂ ನಡೆದಿದೆ. 1975ರ ನಂತರ ಉಭಯ ಪಕ್ಷಗಳ ನಡುವೆ ನಡೆದ ಅತ್ಯಂತ ಭೀಕರ ಘರ್ಷಣೆ ಇದಾಗಿದೆ. ಗಡಿಯಲ್ಲಿನ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಎರಡೂ ದೇಶದವರು ಸಭೆ ನಡೆಸುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ 2023 ರಲ್ಲಿ ಬ್ರಿಕ್ಸ್ ಶೃಂಗಸಭೆಯ ಸಂದರ್ಭದಲ್ಲಿ ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರೊಂದಿಗೆ ಮಾತನಾಡಿದ್ದರು. ಆಗ ಗಡಿ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಪ್ರಯತ್ನಿಸಲಾಗುವುದು ಎಂದು ಇಬ್ಬರೂ ನಾಯಕರು ಒಪ್ಪಿಕೊಂಡರು. ಹಾಗಾಗಿ ಇತ್ತೀಚೆಗೆ ಭಾರತ-ಚೀನಾ ಸೇನೆಗಳ ನಡುವೆ ಘರ್ಷಣೆ ನಡೆದಿದೆ ಎಂಬ ವೈರಲ್ ಸುದ್ದಿಯಲ್ಲಿ ಯಾವುದೇ ಸತ್ಯಾಂಶವಿಲ್ಲ.
schema:reviewRating
schema:author
schema:datePublished
schema:inLanguage
  • Telugu
schema:itemReviewed
Faceted Search & Find service v1.16.115 as of Oct 09 2023


Alternative Linked Data Documents: ODE     Content Formats:   [cxml] [csv]     RDF   [text] [turtle] [ld+json] [rdf+json] [rdf+xml]     ODATA   [atom+xml] [odata+json]     Microdata   [microdata+json] [html]    About   
This material is Open Knowledge   W3C Semantic Web Technology [RDF Data] Valid XHTML + RDFa
OpenLink Virtuoso version 07.20.3238 as of Jul 16 2024, on Linux (x86_64-pc-linux-musl), Single-Server Edition (126 GB total memory, 2 GB memory in use)
Data on this page belongs to its respective rights holders.
Virtuoso Faceted Browser Copyright © 2009-2025 OpenLink Software